ಸೋಮವಾರಪೇಟೆ, ಮಾ. 12: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಚಾಲನೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್ ಮಾತನಾಡಿ, ತಾಲೂಕಿನ 146 ಕೇಂದ್ರಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು, 13,299 ಗುರಿ ಹೊಂದಲಾಗಿದೆ ಎಂದರು. ತಾಲೂಕಿನ 13 ಪ್ರಾಥಮಿಕ ಆರೋಗ್ಯ ಕೇಂದ್ರ, 2 ಸಮುದಾಯ ಆರೋಗ್ಯ ಕೇಂದ್ರ, 1 ಸಾರ್ವಜನಿಕ ಆಸ್ಪತ್ರೆ, 5 ಪ್ರವಾಸಿ ತಾಣಗಳಲ್ಲಿ ಕೇಂದ್ರಗಳನ್ನು ತೆರೆದು ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭ ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಹೆಚ್.ಸಿ. ನಾಗೇಶ್, ರಮೇಶ್, ಎ.ಪಿ. ವೀರರಾಜು, ವೈದ್ಯಾಧಿಕಾರಿ ಶಿವಪ್ರಸಾದ್, ವೈದ್ಯೆ ದೇವಿಕಾ, ಹಿರಿಯ ಆರೋಗ್ಯ ಸಹಾಯಕಿ ಶಾಂತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕುಂಬೂರು ಗ್ರಾಮದಲ್ಲಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಇಲ್ಲಿಗೆ ಸಮೀಪದ ಕುಂಬೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಂ. ಸೋಮಪ್ಪ ಉದ್ಘಾಟಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯ ಪ್ರಸನ್ನ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಕೆ.ಎಸ್. ಸುಶೀಲ, ಆಶಾ ಕಾರ್ಯಕರ್ತೆ ರಾಣಿ, ಅಂಗನವಾಡಿ ಕಾರ್ಯಕರ್ತೆಯರಾದ ರುಕ್ಮಿಣಿ ಹಾಗೂ ವತ್ಸಲ ಇದ್ದರು.
ಮಾದಾಪುರ
ಮಾದಾಪುರದ ಜಂಬೂರು ಗ್ರಾಮದ ಅಂಗನವಾಡಿಯಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ನಾಪಂಡ ಉಮೇಶ್ ಮತ್ತು ಮಜೀದ್ ಅವರುಗಳು ಚಾಲನೆ ನೀಡಿದರು.
ಈ ಸಂದರ್ಭ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ ಐರಿನ್ ಕ್ರಾಸ್ತಾ, ಆರೋಗ್ಯ ಸಹಾಯಕಿ ಸುಶೀಲ, ಅಂಗನವಾಡಿ ಕಾರ್ಯಕರ್ತೆ ಜಯಂತಿ, ರಶ್ಮಿ, ಆಶಾ ಕಾರ್ಯಕರ್ತೆ ಲೀಲಾ ಅವರುಗಳು ಉಪಸ್ಥಿತರಿದ್ದರು.
ಶನಿವಾರಸಂತೆ
ಪಟ್ಟಣದ ರೋಟರಿ ಸಂಸ್ಥೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಟಿ.ಆರ್. ಪುರುಷೋತ್ತಮ್ ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ತ್ಯಾಗರಾಜ ಕಾಲೋನಿ, ಗುಂಡೂರಾವ್ ಬಡಾವಣೆ 4 ಬೂತ್‍ಗಳಲ್ಲಿ ವಿವಿಧ ಸಂಘಗಳ ಸಹಭಾಗಿತ್ವದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು. ದುಂಡಳ್ಳಿ ಗ್ರಾಮ ಪಂಚಾಯಿತಿಯ 2 ಬೂತ್‍ಗಳಲ್ಲಿ 86 ಮಕ್ಕಳು ಹಾಗೂ ಹಂಡ್ಲಿ ಗ್ರಾಮ ಪಂಚಾಯಿತಿಯ 2 ಬೂತ್‍ಗಳಲ್ಲಿ 116 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು.
ರೋಟರಿ ಸಂಸ್ಥೆ ಕಾರ್ಯದರ್ಶಿ ಎ.ಡಿ. ಮೋಹನ್‍ಕುಮಾರ್, ನಿಯೋಜಿತ ಅಧ್ಯಕ್ಷ ಶುಭು, ನಿರ್ದೇಶಕರುಗಳಾದ ಶ್ವೇತಾ, ವಸಂತಕುಮಾರ್, ಎಚ್.ವಿ. ದಿವಾಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್, ಆರೋಗ್ಯ ಸಹಾಯಕಿ ಕೆ.ಕೆ. ಸರಸ್ವತಿ, ಆಶಾ ಕಾರ್ಯಕರ್ತೆಯರಾದ ಎಸ್.ಪಿ. ಭಾಗ್ಯ, ಧನಲಕ್ಷ್ಮಿ, ಸ್ವಾತಿ, ಲಕ್ಷ್ಮೀದೇವಿ ಪಾಲ್ಗೊಂಡಿದ್ದರು.
ಗುಡ್ಡೆಹೊಸೂರು
ಇಲ್ಲಿನ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಪಲ್ಸ್ ಪೋಲಿಯೋ ಕೇಂದ್ರ ಸ್ಥಾಪಿಸಲಾಗಿತ್ತು. ಅಂಗನವಾಡಿ ಕೇಂದ್ರದ ಶಿಕ್ಷಕಿಯರಾದ ಎ.ಸಿ. ಕವಿತಾ, ಬಿ.ಎಸ್. ಕವಿತಾ, ರೂಪಾಕ್ಷಿ ಮತ್ತು ಆಶಾ ಕಾರ್ಯಕರ್ತೆ ಕೆ.ಸಿ. ರುಕ್ಮಿಣಿ ಕಾರ್ಯನಿರ್ವಹಿಸಿದರು. ವೈದ್ಯಾಧಿಕಾರಿಗಳಾದ ಡಾ. ಪ್ರತಾಪ್‍ಸಾಗರ್ ಮತ್ತು ಡಾ. ಸಂಜಯ್ ಭೇಟಿ ನೀಡಿದ್ದರು.
ಗೋಣಿಕೊಪ್ಪ
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಿರಿಯ ವೈದ್ಯ ಡಾ. ಚಂದ್ರಶೇಖರ್ ಉದ್ಘಾಟಿಸಿದರು.
ಈ ಸಂದರ್ಭ ಹಿರಿಯ ವೈದ್ಯ ಡಾ. ಚಂದ್ರಶೇಖರ್, ಗೋಣಿಕೊಪ್ಪ ರೋಟರಿ ಕ್ಲಬ್ ಅಧ್ಯಕ್ಷ ಪಾರುವಂಗಡ ದಿಲನ್ ಚೆಂಗಪ್ಪ, ತಾಲೂಕು ಆರೋಗ್ಯ ಅಧಿಕಾರಿ ಡಾ. ಯತಿರಾಜ್, ಸ್ಥಳೀಯ ವೈದ್ಯ ಡಾ. ಬಿಷನ್ ಉಪಸ್ಥಿತರಿದ್ದರು.
ಸುಂಟಿಕೊಪ್ಪ
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಚಾಲನೆ ನೀಡಿದರು. ಈ ಸಂದರ್ಭ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಾಣೇಶ್, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತಿತರರು ಇದ್ದರು.
ಚೆಟ್ಟಳ್ಳಿ
ಸಮೀಪದ ಕಂಡಕರೆಯ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚೆಟ್ಟಳ್ಳಿ ಗ್ರಾಮ ಪಂಚಾಯತಿ ಸದಸ್ಯ ಮೊಹಮ್ಮದ್ ರಫಿ ಚಾಲನೆ ನೀಡಿದರು.
ಕೂಡಿಗೆ
ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅರೋಗ್ಯ ಕೇಂದ್ರದ ವ್ಯದ್ಯಾಧಿಕಾರಿ ಡಾ. ರವಿಚಂದ್ರ ನೆರವೇರಿಸಿದರು. ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕುಶಾಲನಗರ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.