ಕುಶಾಲನಗರ, ಮಾ. 14: ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಘಟಕ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಆಶಾ ಕಾರ್ಯಕರ್ತರಿಗೆ ಕ್ಷಯರೋಗ ನಿಯಂತ್ರಣದ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು.
ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷಯರೋಗ ಪತ್ತೆಹಚ್ಚುವದು, ನಿಯಂತ್ರಣ, ಜಾಗೃತಿ ಕುರಿತಾಗಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ಶಿವಕುಮಾರ್ ತರಬೇತಿ ನೀಡಿದರು.
ಡಾ. ಶ್ರೀನಿವಾಸ್ ಮಾತನಾಡಿ, ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡುವ ಸಂದರ್ಭ ಕ್ಷಯರೋಗದ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸಿ ಅಗತ್ಯವಿರುವವರಿಗೆ ತಪಾಸಣೆ ಕೈಗೊಳ್ಳಲು ಸಲಹೆ ನೀಡುವಂತೆ ಸೂಚಿಸಿದರು.
ಡಾ. ಶಿವಕುಮಾರ್, ಕ್ಷಯರೋಗ ಹರಡುವ ವಿಧಾನ, ಚಿಕಿತ್ಸಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಡಾ. ಶ್ರೀದೇವಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ, ಉಮೇಶ್, ನಾಗಭೂಷಣ್, ರಮ್ಯ, ಮಹೇಶ್, ರಾಘವೇಂದ್ರ, ಅರುಣ್ ಮತ್ತಿತರರು ಇದ್ದರು.