ಚೆಟ್ಟಳ್ಳಿ, ಮಾ. 14: ವೀರಾಜಪೇಟೆ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕ ಮಹದೇವಸ್ವಾಮಿ ನೇತೃತ್ವದಲ್ಲಿ ಮಡಿಕೇರಿ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ. ಯತ್ನಟ್ಟಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್. ಸಿರಾಜ್ ಅಹಮದ್ ತಂಡ ಪಾಲಿಬೆಟ್ಟದ ಸುತ್ತಮುತ್ತಲಿನ ತೋಟಗಳಿಗೆ ಭೇಟಿ ನೀಡಿ ಕಾರ್ಮಿಕರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕಾರ್ಮಿಕರು ಹಾಗೂ ಆಡಳಿತ ವರ್ಗದೊಂದಿಗೆ ಚರ್ಚಿಸಿದರು.
ಇದೇ ವೇಳೆ ಸಿದ್ದಾಪುರದ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆಯಡಿ ತಪಾಸಣೆ ನಡೆಸಿದರು.