ಮಡಿಕೇರಿ, ಮಾ. 14: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಾ. 18 ರಂದು ಕೊಡಗು ಜಿಲ್ಲೆಗೆ ಆಗಮಿಸಲಿದ್ದು, ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಂದು ಅಪರಾಹ್ನ 3.30 ಗಂಟೆಗೆ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಡೆಯಲಿರುವ ಪಕ್ಷದ ಜಿಲ್ಲಾ, ತಾಲೂಕು ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಪಕ್ಷದ ನಗರ ಅಧ್ಯಕ್ಷ ಮಹೇಶ್ ಜೈನಿ ತಿಳಿಸಿದ್ದಾರೆ.