ಮಡಿಕೇರಿ, ಮಾ. 14 : ಲೋಕಸಭಾ ಚುನಾವಣೆ ಹಿನ್ನೆಲೆÉ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾ. 27 ರವರೆಗೆ ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನ ನಡೆಯಲಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಲಕ್ಷ್ಮಿ ಪ್ರಿಯ ತಿಳಿಸಿದ್ದಾರೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಸ್ವೀಪ್ ಕಾರ್ಯಕ್ರಮಗಳಡಿ ಮತದಾರರ ನೋಂದಣಿ, ಮತದಾನ ಕುರಿತಂತೆ ಅರಿವು ಮತ್ತು ಜಾಗೃತಿ, ಮತದಾನ ಹಾಗೂ ಇವಿಎಂ ವಿವಿಪ್ಯಾಟ್ ಕುರಿತಂತೆ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ತಾ. 15 ರಿಂದ (ಇಂದಿನಿಂದ) ಬೆಳಿಗ್ಗೆ 11 ಗಂಟೆಗೆ ಎನ್‍ಸಿಸಿ ವಿದ್ಯಾರ್ಥಿಗಳಿಂದ ನಗರದ ಕೋಟೆ ಆವರಣದಲ್ಲಿ ಜಾಗೃತಿ ಜಾಥಾಗೆ ಚಾಲನೆ ದೊರೆಯಲಿದೆ. ಹಾಗೆಯೇ ಸೋಮವಾರಪೇಟೆಯಲ್ಲಿ ವಿಶೇಷ ಚೇತನ ಮತದಾರರಿಂದ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿಂದ ತ್ರಿಚಕ್ರ ವಾಹನ ರ್ಯಾಲಿ ನಡೆಯಲಿದೆ.

ತಾ. 16 ರಂದು ಮಧ್ಯಾಹ್ನ 2 ಗಂಟೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಂಗ ಇಲಾಖಾಧಿಕಾರಿಗಳಿಗೆ ಇವಿಎಂ, ವಿವಿಪ್ಯಾಟ್ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3.30 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಆಶಾ ಕಾರ್ಯಕರ್ತರು ಹಾಗೂ ಎಎನ್‍ಎಮ್ಸ್ ಅವರಿಗೆ ಇವಿಎಂ, ವಿವಿಪ್ಯಾಟ್ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಲಿದೆ. ತಾ. 18 ರಂದು ಬೆಳಿಗ್ಗೆ 11 ಗಂಟೆಗೆ ವೀರಾಜಪೇಟೆಯಲ್ಲಿ ಹಾಗೂ ತಾ. 19 ರಂದು ಬೆಳಿಗ್ಗೆ 11 ಗಂಟೆಗೆ ನಗರದ ವಿಶೇಷ ಚೇತನ ಮತದಾರರಿಂದ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿಂದ ತ್ರಿಚಕ್ರ ವಾಹನ ರ್ಯಾಲಿ ನಡೆಯಲಿದೆ.

ತಾ. 19 ರಂದು ಸಂಜೆ 4.30 ಗಂಟೆಗೆ ನಗರದ ರಾಜಾಸೀಟ್‍ನಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಗಾಳಿಪಟ ಉತ್ಸವ ಹಾಗೂ ರಾಜಾಸೀಟ್‍ನಿಂದ ಎಫ್.ಎಂ.ಸಿ. ಕಾಲೇಜುವರೆಗೆ ಮ್ಯಾರಾಥಾನ್ ನಡೆಯಲಿದೆ.

ತಾ. 21 ರಂದು ಸಂಜೆ 6 ಗಂಟೆಗೆ ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಂದ ಕ್ಯಾಂಡಲ್ ಮಾರ್ಚ್ ಹಾಗೂ ತಾ. 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಮಡಿಕೇರಿ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಯಲಿದೆ.

ತಾ. 25 ರಂದು ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆ ತಾ.ಪಂ.ನಲ್ಲಿ ಸೋಮವಾರಪೇಟೆ ತಾ. ಮತಗಟ್ಟೆ ಅಧಿಕಾರಿಗಳಿಗೆ ಕಾರ್ಯಾಗಾರ ಹಾಗೂ ತಾ. 26 ರಂದು ಬೆಳಿಗ್ಗೆ 11 ಗಂಟೆಗೆ ವೀರಾಜಪೇಟೆ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ವೀರಾಜಪೇಟೆ ತಾಲೂಕು ಕಚೇರಿಯಲ್ಲಿ ಕಾರ್ಯಾಗಾರ ನಡೆಯಲಿದೆ.

ತಾ. 27 ರಂದು ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆಯಲ್ಲಿ ಹಾಗೂ ತಾ. 27 ರಂದು ಬೆಳಿಗ್ಗೆ 11 ಗಂಟೆಗೆ ವೀರಾಜಪೇಟೆಯಲ್ಲಿ ಆಶಾ ಕಾರ್ಯಕರ್ತರು ಹಾಗೂ ಎಎನ್‍ಎಮ್ಸ್ ಅವರಿಗೆ ಇವಿಎಂ, ವಿವಿಪ್ಯಾಟ್ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿ.ಪಂ. ಸಿಇಓ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.