ಸೋಮವಾರಪೇಟೆ, ಮಾ.14: ಸಮಾಜದ ಕೈಗನ್ನಡಿಯಂತೆ ಕಾರ್ಯನಿರ್ವಹಿಸುವ ಪತ್ರಿಕೋದ್ಯಮ ದಿಂದ ಸಾಮಾಜಿಕ ಜವಾಬ್ದಾರಿ ಹೆಚ್ಚಳ ವಾಗುತ್ತದೆ ಎಂದು ಚಿಕ್ಕಅಳುವಾರ ಸ್ನಾತಕ್ಕೋತ್ತರ ಕೇಂದ್ರದ ಉಪನ್ಯಾಸಕ ಜಮೀರ್ ಅಹಮ್ಮದ್ ಅಭಿಮತ ವ್ಯಕ್ತಪಡಿಸಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪದವಿ ಕಾಲೇಜು, ಇತಿಹಾಸ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಆಶ್ರಯದಲ್ಲಿ, ಬಿಟಿಜಿಸಿ ಕಾಲೇಜು ಸಭಾಂಗಣದಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸ Àಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿ, ‘ಪತ್ರಿಕೋದ್ಯಮದಲ್ಲಿ ಯುವ ಜನಾಂಗದ ಪಾತ್ರ’ ವಿಷಯದ ಬಗ್ಗೆ ಅವರು ಮಾತನಾಡಿದರು.

ಯುವ ಜನಾಂಗಕ್ಕೆ ಪತ್ರಿಕೋದ್ಯ ಮದಲ್ಲಿ ವಿಫುಲ ಅವಕಾಶವಿದ್ದು, ಸಮಾಜಮುಖಿ ಚಿಂತನೆ ಹೊಂದಿರು ವವರು ಈ ಕ್ಷೇತ್ರವನ್ನು ಆರಿಸಿಕೊಳ್ಳ ಬಹುದು. ಸುತ್ತಮುತ್ತಲಿನ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿ ಸುವ, ಸಮಾಜದ ಅಂಕುಡೊಂಕು ಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಯತ್ನಿಸುವವರಿಗೆ ಪತ್ರಿಕಾ ರಂಗ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡುತ್ತದೆ ಎಂದರು.

ಸಾಮಾಜಿಕ ಸುಧಾರಣೆಯ ತುಡಿತ ಹೊಂದಿರುವ ಪತ್ರಕರ್ತರು ಸಮಾಜದ ಆಸ್ತಿಯಾಗಿದ್ದು, ಯುವ ಜನಾಂಗ ಉತ್ತಮ ಶಿಕ್ಷಣ ಪಡೆಯುವ ಮೂಲಕ ಬದ್ಧತೆಯಿಂದ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವಂತಾಗಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್‍ಕುಮಾರ್ ಮಾತನಾಡಿ, ಯುವ ಜನಾಂಗ ದೇಶದ ಆಸ್ತಿಯಾಗಿದ್ದು, ಸರಿ ದಾರಿಯಲ್ಲಿ ಮುನ್ನಡೆದರೆ ಮಾತ್ರ ರಾಷ್ಟ್ರದ ಅಭಿವೃದ್ಧಿಯ ಭಾಗವಾಗಬಹುದು. ಈ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಚಿಂತಿಸುತ್ತಾ ಸಾಗುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಿಟಿಸಿಜಿ ಕಾಲೇಜು ಪ್ರಾಂಶುಪಾಲ ಪ್ರೋ. ಶ್ರೀಧರ್ ಮಾತನಾಡಿ, 2015ರಲ್ಲಿ ನ್ಯಾಕ್ ಮಾನ್ಯತೆ ಪಡೆದ ಬಿಟಿಸಿಜಿ ಕಾಲೇಜು ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ಸಲ್ಲಿಸುತ್ತಿದೆ. ಸುಸಜ್ಜಿತÀ ಸೌಕರ್ಯ ಗಳನ್ನು ಒಳಗೊಂಡು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿದೆ ಎಂದರು.

ಕನ್ನಡಪ್ರಭ ಜಿಲ್ಲಾ ವರದಿಗಾರ ವಿಘ್ನೇಶ್ ಭೂತನಕಾಡು ‘ಫೋಟೋ ಜರ್ನಲಿಸಂ’ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಸವಿಸ್ತಾರ ಮಾಹಿತಿ ಒದಗಿಸಿದರೆ, ಚುಟುಕು ಸಾಹಿತಿ ಮತ್ತು ಚಿತ್ರ ಕಲಾವಿದರಾದ ವಹೀದ್ ಜಾನ್ ಚಿತ್ರ ಕಲೆ ರಚನೆಗಳ ಬಗ್ಗೆ ತಿಳಿಸಿದರು. ಕಾಲೇಜಿನ ಇತಿಹಾಸ ಉಪನ್ಯಾಸಕ ಎಂ.ಎಸ್.ಸುನಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಪಿ. ಲೋಕೇಶ್, ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಚಾಲಕ ಎಂ.ಎಸ್. ಶಿವಮೂರ್ತಿ ಅವರುಗಳು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಭಾಗ ವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯ ಕ್ರಮದ ನಂತರ ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ವಿವಿಧ ಪದವಿ ಕಾಲೇಜಿನಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.