ಮಡಿಕೇರಿ, ಮಾ.14: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ, ಕೊಡಗರಹಳ್ಳಿ, ಏಳನೇ ಹೊಸಕೋಟೆ, ಗರಗಂದೂರು, ಮಾದಪುರ, ಐಗೂರು ಮತ್ತಿತರ ಮತಗಟ್ಟೆ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಮತಗಟ್ಟೆ ಕೇಂದ್ರದಲ್ಲಿ ರ್ಯಾಂಪ್ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಮತ್ತಿತರ ಮೂಲ ಸೌಲಭ್ಯಗಳು ಇವೆಯೇ ಎಂಬದನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರರು, ಸೆಕ್ಟರ್ ಅಧಿಕಾರಿಗಳು ಇತರರು ಇದ್ದರು.