ಸೋಮವಾರಪೇಟೆ, ಮಾ. 14: ಲೋಕಸಭಾ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಲ್ಲಿ ನೋಂದಣಿ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನ ಮತದಾರರಿಂದ ತಾ. 15ರಂದು (ಇಂದು) ಬೆಳಿಗ್ಗೆ 10.30ಕ್ಕೆ ಇಲ್ಲಿನ ತಾಲೂಕು ಪಂಚಾಯಿತಿ ಆವರಣದಿಂದ ತ್ರಿ ಚಕ್ರ ವಾಹನ ರ್ಯಾಲಿ ಆಯೋಜಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.