ಮಡಿಕೇರಿ, ಮಾ. 15 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ವತಿಯಿಂದ ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅನುಕೂಲವಾಗುವಂತೆ ಪರೀಕ್ಷಾ ಪೂರ್ವ ಉಚಿತ ತರಬೇತಿ ಕಾರ್ಯಾಗಾರವು ತಾ. 31 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸೋಮವಾರಪೇಟೆಯ ಪತ್ರಿಕಾ ಭವನದಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಿದ ಮಕ್ಕಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.