ಮಡಿಕೇರಿ, ಮಾ. 16: ಪಿ.ಎಲ್. ಪೂಜಿತಾ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ-ಮಾನಸ ಗಂಗೋತ್ರಿ ಮೈಸೂರಿನಲ್ಲಿ ಎಂ.ಎ. ಕನ್ನಡ ಸ್ನಾತಕೋತ್ತರ ಪದವಿ ಪಡೆದು ಮೈಸೂರು ವಿಶ್ವವಿದ್ಯಾಲಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾಳೆ. ಜೊತೆಗೆ 9 ಚಿನ್ನದ ಪದಕ ಹಾಗೂ 4 ನಗದು ಬಹುಮಾನವನ್ನು ಪಡೆದುಕೊಂಡಿದ್ದಾಳೆ. 99ನೇ ಘಟಿಕೋತ್ಸವ ತಾ. 17 ರಂದು (ಇಂದು) ನಡೆಯಲಿದ್ದು, ಈ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈಕೆ ಪೊನ್ನಂಪೇಟೆ ತಾಲೂಕಿನ ಮತ್ತೂರು ಗ್ರಾಮದ ನಿವಾಸಿ ಲಕ್ಷ್ಮಣ ಪಿ.ಆರ್. ಸತ್ಯವತಿ ದಂಪತಿಯ ಪುತ್ರಿ.