ಚೆಟ್ಟಳ್ಳಿ: ಸಮೀಪದ ಕಂಡಕರೆಯ ಮತಗಟ್ಟೆಯಲ್ಲಿ ಇವಿಎಂ ಹಾಗೂ ವಿವಿ ಪ್ಯಾಟ್‍ಗಳ ಕುರಿತು ಜಿಲ್ಲಾ ಸ್ವೀಪ್ ಸಮಿತಿಯಿಂದ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ನಡೆಸಲಾಯಿತು.
ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಸಾರ್ವಜನಿಕರಿಗೆ ಮತದಾನ ಮಹತ್ವದ ಬಗ್ಗೆ ತಿಳಿಸಿದರು. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತೀರ್ಥಕುಮಾರ್ ಮಾತನಾಡಿ, ಈಗಾಗಲೇ ಮತದಾರ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, 18 ವಯಸ್ಸು ಪೂರ್ಣಗೊಂಡವರು ಮತದಾರ ಪಟ್ಟಿಗೆ ಸೇರ್ಪಡೆಯಾಗಬೇಕು ಎಂದರು.
ಒಂದು ಬೂತಿನಿಂದ ಮತ್ತೊಂದು ಬೂತಿಗೆ ವರ್ಗಾವಣೆಗೊಳ್ಳಲು ಮತದಾರರು ಅರ್ಜಿಗಳನ್ನು ಸಲ್ಲಿಸಿದ್ದು, ಇದನ್ನು ಆದಷ್ಟು ಬೇಗ ಮಾಡಿಕೊಡಬೇಕಾಗಿ ಅಧಿಕಾರಿಗಳಿಗೆ ಮನವಿ ಮಾಡಿದರು..
ಈ ಸಂದರ್ಭ ಬೂತ್ ಬಿ.ಎಲ್.ಓ, ಗ್ರಾಮ ಪಂಚಾಯಿತಿ ಸದಸ್ಯ ಮೊಹಮ್ಮದ್ ರಫಿ, ಗ್ರಾಮಸ್ಥರಾದ ಹುಸೈನ್, ಫಾರೂಖ್, ಸುಬ್ರಮಣಿ, ಇಬ್ರಾಹಿಂ, ಕೃತಿಕಾ, ನೂಜಿಬೈಲು ಪ್ರಕಾಶ್, ಅಜೀಜ್, ನೌಷಾದ್ ಮತ್ತಿತರರು ಇದ್ದರು.ನಾಪೆÇೀಕ್ಲು: ಲೋಕಸಭಾ ಚುನಾವಣಾ ಆಯೋಗದ ಸೂಚನೆಯಂತೆ ಗ್ರಾಮ ಗ್ರಾಮಗಳಲ್ಲಿ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ನಡೆಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಬಲ್ಲಮಾವಟಿ ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು.
ಮತದಾರರು ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡು ಅಣಕು ಮತದಾನ ಮಾಡಿದರು. ಪೇರೂರು, ಬಲ್ಲಮಾವಟಿ ಗ್ರಾಮಗಳಲ್ಲಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು. ಸೆಕ್ಟರ್ ಅಧಿಕಾರಿ ಕುಮಾರ್, ಕಂದಾಯ ಇಲಾಖೆ ಸಿಬ್ಬಂದಿ ಪೂಣಚ್ಚ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.