ಗೋಣಿಕೊಪ್ಪಲು, ಮಾ. 16: ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಯಾಕುಬ್ ಕೆ.ಎ. ಅವರನ್ನು ಗೋಣಿಕೊಪ್ಪಲುವಿನ ಯುನೈಟೆಡ್ ಜಮಾಅತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಜಮಾಅತ್‍ನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುನೈಟೆಡ್ ಜಮಾಅತ್‍ನ ಅಧ್ಯಕ್ಷ ನಜೀರ್ ಅಹಮ್ಮದ್, ಉಪಾಧ್ಯಕ್ಷ ಸಲಾಂ, ಕಾರ್ಯದರ್ಶಿ ಅಬ್ದುಲ್ ಸಮ್ಮದ್, ಕಾನೂನು ಸಲಹೆಗಾರ ಸಮೀರ್, ಉಪಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಕಲೀಂಮುಲ್ಲಾ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಬಾಪು ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.