ಮಡಿಕೇರಿ, ಮಾ. 15: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಥಮ ಬಿ.ಬಿ.ಎ ವಿದ್ಯಾರ್ಥಿನಿ ಹೇಮಾವತಿ ಜೆ.ಪಿ. ಕೊಡಗು ಜಿಲ್ಲಾ ಪ್ರಥಮ ಯುವ ಸಾಹಿತ್ಯ ಸಮ್ಮೇಳನದ ಯುವ ಕವಿಗೋಷ್ಠಿಯಲ್ಲಿ ಭಾಗವಹಿಸಿ ಕವನ ವಾಚಿಸಿ ಮೆಚ್ಚುಗೆ ಗಳಿಸಿದ್ದಾರೆ. ಹಾಗೆಯೇ ಇದೇ ಕಾಲೇಜಿನ
ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಬಟ್ಟಿಯಂಡ ಲಿಖಿತಾ ಭಾವಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಂಸೆಗೆ ಭಾಜನರಾಗಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ ಹಾಗೂ ಪ್ರಾಧ್ಯಾಪಕ ವರ್ಗದವರು ಹಾಜರಿದ್ದರು.