ಮಡಿಕೇರಿ, ಮಾ. 16: ನಗರದ ಕಿಡ್ಸ್ ಪ್ಯಾರಡೈಸ್ ಪೂರ್ವ ಪ್ರಾಥಮಿಕ ಶಾಲೆಯ 8ನೇ ವಾರ್ಷಿಕೋತ್ಸವ ತಾ. 19 ರಂದು ಬೆಳಿಗ್ಗೆ 9.15 ಗಂಟೆಗೆ ನಡೆಯಲಿದೆ. ಶಾಲಾ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಡಿ. ತಿಮ್ಮಯ್ಯ, ಶ್ರೀವಳ್ಳಿ ಕ್ಲಿನಿಕ್‍ನ ಡಾ. ಮನೋಹರ್ ಪಾಟ್ಕರ್, ಜಯಲಕ್ಷ್ಮಿ ಪಾಟ್ಕರ್, ‘ಶಕ್ತಿ’ ಉಪ ಸಂಪಾದಕ ಉಜ್ವಲ್ ರಂಜಿತ್, ಸಾಹಿತಿ ಬಿ.ಎ. ಷಂಶುದ್ದೀನ್ ಪಾಲ್ಗೊಳ್ಳಲಿದ್ದಾರೆ.