ಮಡಿಕೇರಿ, ಮಾ. 15: ಫೀ.ಮಾ.ಕಾರ್ಯಪ್ಪ ಕಾಲೇಜು ವತಿಯಿಂದ ಅಂತರ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಹಾಗೂ ಥ್ರೋಬಾಲ್ ಪಂದ್ಯಾಟ ಏರ್ಪಡಿಸಲಾಗಿದ್ದು, ತಾ. 16ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭದ ಅತಿಥಿಯಾಗಿ ಕೆ.ಎಂ. ಗಣೇಶ್, ಸಮಾರೋಪದಲ್ಲಿ ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಉಪಸ್ಥಿತರಿರುವರು. ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಡಿ. ತಿಮ್ಮಯ್ಯ ಅಧ್ಯಕ್ಷತೆ ವಹಿಸುವರು.