ಮಡಿಕೇರಿ, ಮಾ. 15: ಮಡಿಕೇರಿಯ ಶಂಕರ್ ಕ್ರಿಕೆಟ್ ಅಕಾಡೆಮಿ ವತಿಯಿಂದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಸಹಯೋಗದೊಂದಿಗೆ ವರ್ಷಂಪ್ರತಿ ನಡೆಸಿಕೊಂಡು ಬರಲಾಗುತ್ತಿರುವ ಕ್ರಿಕೆಟ್ ತರಬೇತಿ ಶಿಬಿರ ಏ. 3ರಿಂದ 22ರವರೆಗೆ ಹಮ್ಮಿಕೊಳ್ಳಲಾಗಿದೆ.
ಕೊಡಗು ವಿದ್ಯಾಲಯದ ಮೈದಾನದಲ್ಲಿ ಶಿಬಿರ ನಡೆಯಲಿದ್ದು, 8 ವರ್ಷದಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದ್ದು, ಆಸಕ್ತರು ಏ.3ರಂದು ಮಧ್ಯಾಹ್ನ 3 ಗಂಟೆಗೆ ಮೈದಾನದಲ್ಲಿ ಹಾಜರಿರಬೇಕಿದೆ. ಹೆಚ್ಚಿನ ಮಾಹಿತಿಗೆ ಮೊ. 9980060322, 9945273688 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಾಂಡರರ್ಸ್ ಕ್ಲಬ್ನ ಕಾರ್ಯದರ್ಶಿ ರಘು ಮಾದಪ್ಪ ತಿಳಿಸಿದ್ದಾರೆ.