ಮಡಿಕೇರಿ, ಮಾ. 16: 2018ರ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ. 2018ರ ಜನವರಿ 1 ರಿಂದ 2018ರ ಡಿಸೆಂಬರ್ 31 ರ ನಡುವೆ ಪ್ರಕಟಗೊಂಡ ಪುಸ್ತಕಗಳನ್ನು 2018ರ ಸಾಲಿನ ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುವದು. ಕೊಡವ ಕವನ ಸಂಕಲನ ಕೊಡವ ಕಥಾ ಸಂಕಲನ, ಕೊಡವ ಕಾದಂಬರಿ, ಕೊಡವ ಕಾವ್ಯ, ಕೊಡವ ನಾಟಕ, ಕೊಡವ ಭಾಷೆ ಮತ್ತು ಸಂಸ್ಕøತಿಯ ಬಗ್ಗೆ ಅಧ್ಯಯನ ಗ್ರಂಥ ಹಾಗೂ ಕೊಡವ ಭಾಷೆಯಿಂದ ಇತರ ಭಾಷೆಗೆ ಅಥವಾ ಅನ್ಯ ಭಾಷೆಯಿಂದ ಕೊಡವ ಭಾಷೆಗೆ ಭಾಷಾಂತರಿತ ಕೃತಿಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವದು.
ಅಕಾಡೆಮಿಯು ಹೆಚ್ಚು ಸಂಖ್ಯೆಯಲ್ಲಿ ಸ್ವೀಕರಿಸುವ ಪುಸ್ತಕಗಳ 3 ಪ್ರಕಾರಗಳನ್ನು ಮಾತ್ರ ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುವದು. ಪುಸ್ತಕಗಳ ತಲಾ 4 ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಭಾರತ ಸ್ಕೌಟ್ ಮತ್ತು ಗೈಡ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ-571201 ಈ ವಿಳಾಸಕ್ಕೆ ಸಲ್ಲಿಸುವಂತೆ ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ತಿಳಿಸಿದ್ದಾರೆ.