ಮಡಿಕೇರಿ, ಮಾ. 15 : ನೂತನ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಸ್ಥಳಾವಕಾಶ ಕಲ್ಪಿಸುವ ವಿಚಾರದಲ್ಲಿ ಮಾರ್ಕೆಟ್ ಸಂತೆ ವ್ಯಾಪಾರಿಗಳ ಹಿತರಕ್ಷಣಾ ಸಮಿತಿ ವಿರುದ್ಧ ಮಾಡಿರುವ ಆರೋಪವನ್ನು ನಗರಸಭಾ ಸದಸ್ಯ ಹೆಚ್.ಎಂ.ನಂದಕುಮಾರ್ ಅವರು ಸಾಬೀತು ಪಡಿಸಲಿ ಎಂದು ಸಮಿತಿಯ ಪ್ರಮುಖರು ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಂ.ಎಂ.ಇಸ್ಮಾಯಿಲ್ ಹಾಗೂ ಕಾರ್ಯದರ್ಶಿ ಎಂ.ಎ.ರಜಾóಕ್, ಎಲ್ಲಾ ಜನಪ್ರತಿನಿಧಿಗಳ ಸಹಕಾರದಿಂದ ನೂತನ ಮಾರುಕಟ್ಟೆ ನಿರ್ಮಾಣಗೊಂಡಿದೆ. ಆದರೆ ಶಾಸಕರು, ನಗರಸಭಾ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಯಾವದೇ ಮಾಹಿತಿ ನೀಡದೆ ಮಾರುಕಟ್ಟೆಯನ್ನು ವ್ಯಾಪಾರಕ್ಕೆ ಮುಕ್ತಗೊಳಿಸುವ ಮೂಲಕ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಹಾಗೂ ಸದಸ್ಯ ನಂದಕುಮಾರ್ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷÀ ಬಿ.ಜೆ.ಅಂಕುಶ್, ಖಜಾಂಚಿ ಡಿ.ಎನ್.ಚಂದ್ರಶೇಖರ್, ಬಿ.ಎಂ.ರಮೇಶ್ ಹಾಗೂ ಎಂ.ಐ.ಮುಹಮ್ಮದ್ ಆಲಿ ಉಪಸ್ಥಿತರಿದ್ದರು.