ಮಡಿಕೇರಿ, ಮಾ. 15: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಾ. 18 ರಂದು ಹಮ್ಮಿಕೊಂಡಿದ್ದ ಮಡಿಕೇರಿ ಪ್ರವಾಸ ಮುಂದೂಡಲಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ. ತಾ. 18 ರಂದು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕರೆದಿರುವ ತುರ್ತು ಸಭೆಯಲ್ಲಿ ಭಾಗವಹಿಸುವ ಸಂಬಂಧ ಪ್ರವಾಸ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.