ಮಡಿಕೇರಿ, ಮಾ. 15: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ಸ್ವೀಪ್ ಸಮಿತಿ, ವಕೀಲರ ಸಂಘ ಇವರ ವತಿಯಿಂದ ಮತದಾರರ ಜಾಗೃತಿ ಅಭಿಯಾನ ಪ್ರಯುಕ್ತ ಇವಿಎಂ, ವಿವಿಪ್ಯಾಟ್ ಬಗ್ಗೆ ಮಾಹಿತಿ ಕಾರ್ಯಕ್ರಮವು ತಾ. 16 ರಂದು (ಇಂದು) ಮಧ್ಯಾಹ್ನ 2 ಗಂಟೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ವಿ.ವಿ. ಮಲ್ಲಾಪುರ, ಜಿ.ಪಂ. ಸಿಇಓ ಕೆ.ಲಕ್ಷ್ಮಿಪ್ರಿಯಾ, ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯಕುಮಾರ್, ನೂರುನ್ನೀಸಾ, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‍ಸಿ ಬಿ.ಕೆ. ಮನು, ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್ ಇತರರು ಪಾಲ್ಗೊಳ್ಳಲಿದ್ದಾರೆ.

* ಮಧ್ಯಾಹ್ನ 3.30 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಆಶಾ ಕಾರ್ಯಕರ್ತರು ಹಾಗೂ ಎಎನ್‍ಎಂಗಳಿಗೆ ಇವಿಎಂ, ವಿವಿಪ್ಯಾಟ್ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಜಿ.ಪಂ.ಸಿಇಓ ಕೆ.ಲಕ್ಷ್ಮಿಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ.