ಮಡಿಕೇರಿ, ಮಾ. 15: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ರಕ್ತದಾನ ಶಿಬಿರದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ದಯಾನಂದ ಕೆ.ಸಿ., ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಅಧಿಕಾರಿ ಡಾ. ಕರುಂಬಯ್ಯ ಮತ್ತಿತರರು ಉಪಸ್ಥಿತರಿದ್ದರು.