ಸುಂಟಿಕೊಪ್ಪ, ಮಾ. 17: ಲೋಕ ಸಭಾ ಚುನಾವಣೆಯ ಪೂರ್ವಭಾವಿ ಸಿದ್ಧತೆಗಾಗಿ ಸುಂಟಿಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಇಲ್ಲಿನ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ನಗರ ಬಿಜೆಪಿ ಅಧ್ಯಕ್ಷ ಪಿ.ಆರ್. ಸುನಿಲ್‍ಕುಮಾರ್ ವಹಿಸಿದ್ದರು. ಪಿರಿಯಾಪಟ್ಟಣ ತಾಲೂಕಿನ ಬಿಜೆಪಿ ಮುಖಂಡರೂ ಕೊಡಗು ಬಿಜೆಪಿ ಉಸ್ತುವಾರಿಯಾದ ಕಿರಣ್‍ಜಯರಾಂ ಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ದೇಶದ ಸುಭದ್ರತೆಗೆ ನೀಡುವ ಕೊಡುಗೆಯನ್ನು ಮತದಾರರು ಮನದಟ್ಟು ಮಾಡಿಕೊಡುವಲ್ಲಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಮುಟ್ಟಿಸಬೇಕು ಎಂದು ಹೇಳಿದರು.

ತಾ.ಪಂ. ಸದಸ್ಯೆ ವಿಮಲಾವತಿ ಮಾತನಾಡಿದರು. ಸೋಮವಾರಪೇಟೆ ತಾಲೂಕು ಬಿಜೆಪಿ ಸಂಘಟನಾ ಕಾರ್ಯದರ್ಶಿ ಮನು ರೈ, ಹೋಬಳಿ ಬಿಜೆಪಿ ಅಧ್ಯಕ್ಷ ದಾಸಂಡ ರಮೇಶ್ ಚಂಗಪ್ಪ ಮಾತನಾಡಿದರು. ನಗರ ಕಾರ್ಯದರ್ಶಿ ಬಿ.ಕೆ. ಪ್ರಶಾಂತ್, ಪಂಚಾಯಿತಿ ಸದಸ್ಯ ಸಿ. ಚಂದ್ರ, ಯುವ ಬಿಜೆಪಿ ಅಧ್ಯಕ್ಷ ರಂಜಿತ್ ಪೂಜಾರಿ, ತಾ.ಪಂ. ಮಾಜಿ ಉಪಾಧ್ಯಕ್ಷ ಶಂಕರನಾರಾಯಣ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಬಿ.ಐ. ಭವಾನಿ ಹಾಗೂ ಕಾರ್ಯಕರ್ತರು ಇದ್ದರು.