ಸೋಮವಾರಪೇಟೆ, ಮಾ. 17: ತಾಲೂಕು ಹಿರಿಯ ನಾಗರಿಕ ಸೇವಾ ಟ್ರಸ್ಟ್ ವಾರ್ಷಿಕೋತ್ಸವ ಮತ್ತು ಮಹಾಸಭೆ ತಾ. 24 ರಂದು ಬೆಳಿಗ್ಗೆ 10.30ಕ್ಕೆ ಮಹಿಳಾ ಸಮಾಜದಲ್ಲಿ ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಎಂ.ಟಿ. ದಾಮೋದರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್, ತಹಶೀಲ್ದಾರ್ ಗೋವಿಂದರಾಜು, ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪ ರಾಜೇಶ್, ವೃತ್ತನಿರೀಕ್ಷಕ ನಂಜುಂಡೇಗೌಡ, ಪ್ರಜಾಸತ್ಯ ಪತ್ರಿಕೆಯ ಸಂಪಾದಕ ಡಾ. ಬಿ.ಸಿ. ನವೀನ್ ಕುಮಾರ್, ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಬಿ.ಪಿ. ದೇವರಾಜು ಭಾಗವಹಿಸಲಿದ್ದಾರೆ.