ಮಡಿಕೇರಿ, ಮಾ. 17: ಪ್ರಸಕ್ತ (2018-19) ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿಯಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6-8ನೇ ತರಗತಿಗಳ) ವೃಂದದ ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯಿಂದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈm sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಒದಗಿಸಲಾಗಿರುವ ಠಿsಣಡಿ.ಛಿಚಿಛಿoಟಿಟiಟಿe.iಟಿ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.