ಸೋಮವಾರಪೇಟೆ, ಮಾ. 17: ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದ ಪೂಜೆಯನ್ನು ಆಚರಿಸಲಾಯಿತು.

ವಿದ್ಯಾದೇವತೆ ಸರಸ್ವತಿ ಭಾವಚಿತ್ರ ಮತ್ತು ಪುಸ್ತಕಗಳಿಗೆ ವಿದ್ಯಾರ್ಥಿಗಳು ಪೂಜೆ ಸಲ್ಲಿಸಿದರು. ನಂತರ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಪ್ರಬಾರ ಮುಖ್ಯ ಶಿಕ್ಷಕಿ ಕವಿತ ಸೇರಿದಂತೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.