ಸುಂಟಿಕೊಪ್ಪ, ಮಾ. 17: ಸುಂಟಿಕೊಪ್ಪದ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನ ವತಿಯಿಂದ ಗ್ರಾಮ ದೇವಿಗೆ ಹರಕೆ ಸಮರ್ಪಣೆ ಅನ್ನ ಸಂತರ್ಪಣೆ ನಡೆಸಲಾಯಿತು.
ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿ ವತಿಯಿಂದ ದೇವಿಗೆ ವಿಶೇಷ ಪೂಜೆ, ಹರಕೆ ಸಮರ್ಪಣೆಯನ್ನು ನಡೆಸಲಾಯಿತು. ಮಧ್ಯಾಹ್ನ ದೇವಿಗೆ ವಿಶೇಷ ಪೂಜೆಯೊಂದಿಗೆ ಮಂಗಳಾರತಿ, ಪ್ರಸಾದ ವಿತರಿಸಲಾಯಿತು. ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು.
ಈ ಸಂದರ್ಭ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವೈ.ಎಂ. ಕರುಂಬಯ್ಯ, ಕಾರ್ಯದರ್ಶಿ ಡಾ. ಶಶಿಕಾಂತ ರೈ, ಉಪಾಧ್ಯಕ್ಷ ದಾಸಂಡ ರಮೇಶ್ ಚಂಗಪ್ಪ, ಪಿ.ಕೆ. ಜಗದೀಶ್ ರೈ, ಪಟ್ಟಮನೆ ಶೇಷಪ್ಪ ಮತ್ತಿತರರು ಇದ್ದರು.