ಮೈಸೂರು, ಮಾ.18: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ತಾ. 19 ರಿಂದ (ಇಂದಿನಿಂದ) ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಇಂದಿನಿಂದಲೇ (ತಾ.19) ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಮೈಸೂರು - ಕೊಡಗು ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಮಪತ್ರಗಳನ್ನು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರದ ಅರ್ಜಿಯನ್ನು ಪಡೆದುಕೊಳ್ಳಬಹುದು. ತಾ. 19ರಿಂದ (ಇಂದು) ರಜೆ ದಿನಗಳನ್ನು ಹೊರತುಪಡಿಸಿ, ತಾ. 26ರ ತನಕ ಪೂರ್ವಾಹ್ನ 11ರಿಂದ ಅಪರಾಹ್ನ 3 ಗಂಟೆ ತನಕ ಉಮೇದುವಾರಿಕೆ ಸಲ್ಲಿಸಬಹುದು. ತಾ. 26 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ತಾ. 27ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ತಾ. 29 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 18 ರಂದು ಮತದಾನ ನಡೆಯಲಿದೆ.5 ಜನರಿಗೆ ಅವಕಾಶ : ನಾಮಪತ್ರ ಸಲ್ಲಿಕೆ ಸಂದರ್ಭ ಯಾವದೇ ಗೊಂದಲ ಆಗದಂತೆ ಹಾಗೂ ಕಾರ್ಯಕರ್ತರ ನೂಕುನುಗ್ಗಲು ತಡೆಯಲು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಅಭ್ಯರ್ಥಿ ಸೇರಿದಂತೆ ಐವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಚೇರಿಯ 100 ಮೀಟರ್ ವ್ಯಾಪ್ತಿಯೊಳಗೆ ಬರಲು 3 ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.
ಪರಿಶೀಲನೆ: ಚುನಾವಣಾಧಿಕಾರಿಗಳ ಕಚೇರಿ ಸುತ್ತಮುತ್ತ ಕಾರ್ಯಕರ್ತರು ಗುಂಪುಗೂಡದಂತೆ ಎಚ್ಚರ ವಹಿಸಲಾಗಿದೆ. ಇದಕ್ಕಾಗಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ನಗರ ಡಿಸಿಪಿ ಮುತ್ತುರಾಜ್ ಸ್ಥಳ ಪರಿಶೀಲನೆ ನಡೆಸಿದರು. ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಯಿತು. ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗದ ಸೂಚನೆಯನ್ನು ಕಾರ್ಯಕರ್ತರು, ಅಭ್ಯರ್ಥಿಗಳು ಹಾಗೂ ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ.
ಮಡಿಕೇರಿ ವರದಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮತಗಟ್ಟೆಗಳ ಮೇಲ್ವಿಚಾರಣೆ, ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚ ನಿರ್ವಹಣೆ, ಸಹಾಯವಾಣಿ ಕೇಂದ್ರದ ಕಾರ್ಯನಿರ್ವಹಣೆ, ಸಿ-ವಿಜಿಲ್, ಮತಗಟ್ಟೆಗಳ ಮೇಲ್ವಿಚಾರಣೆ ಮತ್ತಿತರ ಸಂಬಂಧ ನೋಡಲ್ ಅಧಿಕಾರಿಗಳಿಂದ
u ನಾಲ್ಕನೇ ಪುಟಕ್ಕೆ (ಮೊದಲ ಪುಟದಿಂದ) ಮಾಹಿತಿ ಪಡೆದರು. ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗುವದರಿಂದ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳು ನಡೆಯಲಿವೆ. ಅದಕ್ಕೆ ಅನುಮತಿ ನೀಡುವದು, ಚೆಕ್ ಪೋಸ್ಟ್ಗಳಲ್ಲಿ ಹೆಚ್ಚಿನ ನಿಗಾವಹಿಸುವದು, ಚುನಾವಣಾ ವೆಚ್ಚ ನಿರ್ವಹಣೆ ಮತ್ತಿತರ ಬಗ್ಗೆ ನೋಡಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮತಗಟ್ಟೆಗಳಿಗೆ ವಿಶೇಷಚೇತನ ಮತದಾರರನ್ನು ಕರೆದುಕೊಂಡು ಬರಲು ವ್ಯವಸ್ಥೆ ಮಾಡುವದು, ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವದು, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡುವದು, ಮತ್ತಿತರ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪೆನ್ನೇಕರ್ ಅವರು ಸಭೆ ಸಮಾರಂಭಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಸಹಾಯಕ ಚುನಾವಣಾಧಿಕಾರಿಗಳಿಗೆ ಸಲಹೆ ಮಾಡಿದರು.
ಸ್ವೀಪ್ ಸಮಿತಿ ಅಧ್ಯಕೆÀ್ಷ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಮಾದರಿ ನೀತಿ ಸಂಹಿತೆ ಮತ್ತು ಮತದಾನದ ಮಹತ್ವ ಕುರಿತು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್ ಲೋಕಸಭಾ ಚುನಾವಣೆ ಸಂಬಂಧ ವ್ಯವಸ್ಥಿತವಾಗಿ ಕಾರ್ಯ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಿದರು.
ಸಹಾಯಕ ಚುನಾವಣಾಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ್, ಮತಗಟ್ಟೆಗಳ ಮೇಲ್ವಿಚಾರಣಾ ನೋಡಲ್ ಅಧಿಕಾರಿ ಗುಡೂರು ಭೀಮಸೇನ, ಚುನಾವಣಾ ವೆಚ್ಚ ನಿರ್ವಹಣೆಯ ನೋಡಲ್ ಅಧಿಕಾರಿ ಎಚ್.ಇ.ನಂದ, ಸಿ-ವಿಜಿಲ್ ನೋಡಲ್ ಅಧಿಕಾರಿ ಷಂಶುದ್ದೀನ್, ಮತಗಟ್ಟೆ ಅಧಿಕಾರಿಗಳ ನೋಡಲ್ ಅಧಿಕಾರಿ ಮಚ್ಚಾಡೋ, ವಿದ್ಯುನ್ಮಾನ ಮತಯಂತ್ರ ನೋಡಲ್ ಅಧಿಕಾರಿ ಕೆ.ಇ.ಇಬ್ರಾಹಿಂ, ಚುನಾವಣಾ ವೀಕ್ಷಕರ ನೋಡಲ್ ಅಧಿಕಾರಿ ಪ್ರಮೋದ್, ಜಿಲ್ಲಾ ಮಾಹಿತಿ ಅಧಿಕಾರಿ ಅಜೀತ್, ತರಬೇತಿ ನೋಡಲ್ ಅಧಿಕಾರಿ ವಾಲ್ಟರ್ ಡಿಮೆಲೊ, ವಾಹನ ನಿಯೋಜನೆ ನೋಡಲ್ ಅಧಿಕಾರಿ ಶಿವಣ್ಣ ಇತರರು ಹಾಜರಿದ್ದು, ಹಲವು ಮಾಹಿತಿ ನೀಡಿದರು.
ಇಂದು ಮ್ಯಾರಥಾನ್ಗೆ ಚಾಲನೆ
ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಕುರಿತು ತಾ. 19 ರಂದು (ಇಂದು) ಬೆಳಗ್ಗೆ 8.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಮ್ಯಾರಥಾನ್ಗೆ ಚಾಲನೆ ದೊರೆಯಲಿದೆ.
ನಗರದ ಗಾಂಧಿ ಮೈದಾನದಿಂದ ಮೈತ್ರಿಹಾಲ್ವರೆಗೆ ಮ್ಯಾರಥಾನ್ ಸ್ಪರ್ಧೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಗಾಳಿಪಟ ಉತ್ಸವ
ಲೋಕಸಭಾ ಚುನಾವಣೆ ಹಿನೆÀ್ನಲೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾ. 19 ರಂದು (ಇಂದು) ಸಂಜೆ 4 ಗಂಟೆಗೆ ನಗರದ ರಾಜಾಸೀಟ್ನಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಗಾಳಿಪಟ ಉತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.