ಮಡಿಕೇರಿ, ಮಾ. 19: ಲೋಕಸಭಾ ಚುನಾವಣೆ 2019ರ ಮತದಾನದ ಬಗ್ಗೆ ಅರಿವು ಮೂಡಿಸುವ ಸಂಬಂಧ ತಾ. 21 ರಂದು (ನಾಳೆ) ಸಂಜೆ 6 ಗಂಟೆಗೆ ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಂದ ಕ್ಯಾಂಡಲ್ ಮಾರ್ಚ್ ಹಾಗೂ ತಾ. 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಮಡಿಕೇರಿ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಯಲಿದೆ.
ತಾ. 25 ರಂದು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ತಾ.ಪಂ.ನಲ್ಲಿ ಸೋಮವಾರಪೇಟೆ ತಾ.ಮತಗಟ್ಟೆ ಅಧಿಕಾರಿಗಳಿಗೆ ಕಾರ್ಯಾಗಾರ ಹಾಗೂ ಮಾರ್ಚ್, 26 ರಂದು ಬೆಳಗ್ಗೆ 11 ಗಂಟೆಗೆ ವೀರಾಜಪೇಟೆ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ವೀರಾಜಪೇಟೆ ತಾಲೂಕು ಕಚೇರಿಯಲ್ಲಿ ಕಾರ್ಯಾಗಾರ ನಡೆಯಲಿದೆ. ತಾ. 27 ರಂದು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆಯಲ್ಲಿ ಹಾಗೂ ತಾ. 27 ರಂದು ಬೆಳಗ್ಗೆ 11 ಗಂಟೆಗೆ ವೀರಾಜಪೇಟೆಯಲ್ಲಿ ಆಶಾ ಕಾರ್ಯಕರ್ತರು ಹಾಗೂ ಎಎನ್‍ಎಮ್ಸ್ ಅವರಿಗೆ ಇವಿಎಂ/ವಿವಿಪ್ಯಾಟ್ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿ.ಪಂ. ಸಿಇಓ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.