ಗೋಣಿಕೊಪ್ಪ ವರದಿ, ಮಾ. 18 : ಸಿಐಟಿ ರೋಟ್ರ್ಯಾಕ್ಟ್ ಕ್ಲಬ್, ಗೋಣಿಕೊಪ್ಪ ರೋಟರಿ ಕ್ಲಬ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಆಶ್ರಯದಲ್ಲಿ ತಾ. 20 ರಂದು ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ರೋಟ್ರ್ಯಾಕ್ಟ್ ಕ್ಲಬ್ ವತಿಯಿಂದ ರಾಷ್ಟ್ರಮಟ್ಟದಲ್ಲಿ 4 ಕಂತುಗಳಾಗಿ ರಕ್ತದಾನ ನಡೆಸುತ್ತಿರುವ ಕಾರಣ ಮಹಾದಾನ್ 4.0 ಹೆಸರಿನಲ್ಲಿ ಶಿಬಿರ ನಡೆಯುತ್ತಿದೆ. ಬೆ. 10 ಗಂಟೆಯಿಂದ ಶಿಬಿರ ಆರಂಭಗೊಳ್ಳಲಿದೆ. ಸಾರ್ವಜನಿಕರು ಸೇರಿದಂತೆ ಯಾರು ಬೇಕಾದರೂ ರಕ್ತದಾನ ಮಾಡಬಹುದಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ದಿಲನ್ ಚೆಂಗಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9611640550 ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.