ಗೋಣಿಕೊಪ್ಪ ವರದಿ, ಮಾ. 18 : ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ತಾ. 19 ರಂದು ಅನ್ವೇಷಣೆ 2ಕೆ19 ಎಂಬ ರಾಜ್ಯಮಟ್ಟದ ತಾಂತ್ರಿಕ ಯೋಜನೆಗಳ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆ. 10.30 ರಿಂದ ಆರಂಭವಾಗುವ ಕಾರ್ಯಕ್ರಮ ಸಂಜೆ. 4 ಗಂಟೆವರೆಗೆ ನಡೆಯಲಿದೆ. ರಾಜ್ಯದ ಇಂಜಿನಿಯರ್ ಕಾಲೇಜುಗಳ 400 ವಿದ್ಯಾರ್ಥಿಗಳು ಸುಮಾರು 80 ಕ್ಕೂ ಹೆಚ್ಚು ಮಾದರಿಗಳನ್ನು ಪ್ರದರ್ಶನಗೊಳಿಸಲಿದ್ದಾರೆ.
ಕಂಪ್ಯೂಟರ್ ವಿಜ್ಞಾನ, ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ ಕಮ್ಯೂನಿಕೇಷನ್, ಮೆಕಾನಿಕಲ್, ಸಿವಿಲ್ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಪ್ರಾಂಶುಪಾಲ ಡಾ. ಪಿ.ಸಿ. ಕವಿತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.