ಮಡಿಕೇರಿ, ಮಾ. 19: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ, ಕ್ರೀಡಾ ಪ್ರಾಧಿಕಾರ ಇವರ ಸಹ ಯೋಗದಲ್ಲಿ ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ ಮತದಾನದ ಮಹತ್ವ ಕುರಿತು ಮ್ಯಾರಥಾನ್ ನಡೆಯಿತು.ಮ್ಯಾರಥಾನ್‍ನಲ್ಲಿ ಕ್ರೀಡಾ ಪ್ರಾಧಿಕಾರದ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಪಾಲ್ಗೊಂಡಿದ್ದರು. ಮತದಾರರ ಶಿಕ್ಷಣ ಮತ್ತು ಸಹ ಭಾಗಿತ್ವ ಸಮಿತಿ ಅಧ್ಯಕ್ಷೆ ಕೆ. ಲಕ್ಷ್ಮಿಪ್ರಿಯಾ ಮಾತನಾಡಿ, ಜಿಲ್ಲೆಯ 543 ಮತ ಗಟ್ಟೆಗಳಲ್ಲಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರು ತಮ್ಮ ಹೆಸರು ಇದೆಯೇ ಎಂಬದನ್ನು ಖಾತರಿ ಪಡಿಸಿಕೊಳ್ಳು ವಂತೆ ಅವರು ಮನವಿ ಮಾಡಿದರು. ಏಪ್ರಿಲ್ 18 ರಂದು ನಡೆಯುವ ಚುನಾವಣೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತಾಗಬೇಕು ಎಂದು ಅವರು ಕೋರಿದರು. (ಮೊದಲ ಪುಟದಿಂದ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ ಮತದಾನದ ಮಹತ್ವ ಕುರಿತು ಮಾಹಿತಿ ನೀಡಿದರು. ಜಿ.ಪಂ. ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಪೌರಾಯುಕ್ತ ಎಂ.ಎಲ್. ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಅಧಿಕಾರಿ ಮಮ್ತಾಜ್, ಶಿಶು ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕರಾದ ಸವಿತಾ, ಜಿಲ್ಲಾ ವಿಶೇಷಚೇತನ ಅಧಿಕಾರಿ ದೇವರಾಜು, ನಗರಸಭೆಯ ಬಷೀರ್ ಇತರರು ಇದ್ದರು.ತ್ರಿಚಕ್ರ ವಾಹನ ಜಾಥಾ: ಮತದಾನದ ಮಹತ್ವ ಕುರಿತು ವಿಶೇಷಚೇತನರಿಂದ ತ್ರಿಚಕ್ರ ವಾಹನ ಜಾಥಾ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ವಿಶೇಷಚೇತನರಿಂದ ತ್ರಿಚಕ್ರ ವಾಹನ ಜಾಥಾಗೆ ತಾ.ಪಂ.ಇಒ ಲಕ್ಷ್ಮಿಪ್ರಿಯ ಚಾಲನೆ ನೀಡಿದರು. ತಾಲೂಕು ವೈದ್ಯಾಧಿಕಾರಿ ಡಾ.ಎ.ಸಿ.ಶಿವಕುಮಾರ್, ಜಿಲ್ಲಾ ವಿಕಲಚೇತನ ಅಧಿಕಾರಿ ದೇವರಾಜು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ತಾಲ್ಲೂಕು ಬಿಸಿಎಂ ಅಧಿಕಾರಿ ಕವಿತಾ, ವಿಕಾಸ್ ಜನಸೇವಾ ಟ್ರಸ್ಟ್‍ನ ಅಧ್ಯಕ್ಷ ರಮೇಶ್ ಇತರರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮತದಾನದ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.