ಮಡಿಕೇರಿ, ಮಾ. 19: ಮುಂಬರುವ ಮೆ 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿದ್ದು, ಮೈಸೂರು - ಕೊಡಗು ಕ್ಷೇತ್ರದಿಂದ ಮೂವರು ಅಭ್ಯರ್ಥಿಗಳು ಆರು ನಾಮಪತ್ರ ಸಲ್ಲಿಸಿದ್ದಾರೆ.(ಮೊದಲ ಪುಟದಿಂದ) ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೋಷಿಯಲಿಸ್ಟ್ ಯೂನಿಟ್ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದಿಂದ ಪಿ.ಎಸ್. ಸಂಧ್ಯಾ, ನ್ಯೂ ಇಂಡಿಯಾ ಕಾಂಗ್ರೆಸ್ ಪಾರ್ಟಿ (ಸಿಎನ್‍ಸಿಪಿ) ಪಕ್ಷದ ರಾಜ್ಯಾಧ್ಯಕ್ಷ ಅಯೂಬ್ ಖಾನ್ ಅವರುಗಳು ತಲಾ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಜೆ.ಜೆ. ಆನಂದ್ ಕಾಂಗ್ರೆಸ್ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ ಚುನಾವಣಾಧಿಕಾರಿಯಾಗಿರುವ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ನಾಮಪತ್ರ ಸ್ವೀಕರಿಸಿದರು.