ಮಡಿಕೇರಿ, ಮಾ. 20: ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಬಾಳುಗೋಡು ಕೊಡವ ಸಮಾಜ ದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವೈದ್ಯೆ ಡಾ. ಅಪ್ಪನೆರವಂಡ ಸೋನಿಯ ಮಂದಣ್ಣ, ಮನುಷ್ಯನ ಪ್ರತಿಯೊಂದು ಘಟ್ಟದಲ್ಲಿ ಮಹಿಳೆಯ ಪಾತ್ರ ಪ್ರಮುಖವಾಗಿದೆ ಎಂದು ಅಭಿಪ್ರಾಯಪಟ್ಟರು. ವೀರಾಜಪೇಟೆ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಮಹಿಳಾ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು.
ಸಭಾ ಕಾರ್ಯಕ್ರಮದ ನಂತರ ನಡೆದ ವಿವಿಧ ಸ್ಪರ್ಧೆಗಳಲ್ಲಿ ಮಹಿಳಾ ಸದಸ್ಯರು ಪಾಲ್ಗೊಂಡರು. ಪ್ರಾಂಶುಪಾಲೆ ಜ್ಯೋತಿ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ಪೊಮ್ಮಕ್ಕಡ ಕೂಟದ ಖಜಾಂಚಿ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ, ವೀರಾಜಪೇಟೆ ಕಾವೇರಿ ಕಾಲೇಜಿನ ಪ್ರೊ. ಕಳ್ಳಿಚಂಡ ಅಕ್ಕಮ್ಮ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು. ತೀತಿರ ಪುಷಿಅಪ್ಪಣ್ಣ ಪ್ರಾರ್ಥಿಸಿ, ಸಂಘದ ಅಧ್ಯಕ್ಷರಾದ ಚೆರಿಯಪಂಡ ಇಮ್ಮಿ ಉತ್ತಪ್ಪ ಸ್ವಾಗತಿಸಿ, ಬೊಪ್ಪಂಡ ಬೊಳ್ಳಮ್ಮ ವಂದಿಸಿದರು.