ಮಡಿಕೇರಿ, ಮಾ. 20: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಬಳಿಕದ ಎರಡನೇ ದಿನದಂದು ಇಬ್ಬರು ಪಕ್ಷೇತರರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಪಿ.ಎಸ್. ಯಡೂರಪ್ಪ ಹಾಗೂ ಶ್ರೀನಿವಾಸಯ್ಯ ಇಂದು ನಾಮಪತ್ರ ಸಲ್ಲಿಸಿದ್ದು, ನಿನ್ನೆಯಿಂದ ಒಟ್ಟು 5 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.