ಕೂಡಿಗೆ, ಮಾ. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದ ಸೀಗೆಹೊಸೂರು ಕಾರ್ಯಕ್ಷೇತ್ರದಲ್ಲಿ ಬಾಂಧವ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸೀಗೆಹೊಸೂರಿನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿದ್ದ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಬಲೀ ಕರಣಕ್ಕಾಗಿ ಹಲವು ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಎಲ್ಲವೂ ಮಹಿಳೆಯರ ಪ್ರತಿಭೆಗಳನ್ನು ಹೊರ ಹೊಮ್ಮಿಸುವ ವೇದಿಕೆಯಾಗುತ್ತದೆ.
ಯೋಜನೆಯ ಮಾಹಿತಿ ಹಾಗೂ ಸೌಲಭ್ಶಗಳನ್ನು ಸಮರ್ಪಕವಾಗಿ ಬಳಸಿ ಅಭಿವೃದ್ಧಿ ಹೊಂದುವಂತೆ ಸಲಹೆ ನೀಡಿದರು.
ಸೀಗೆಹೊಸೂರು ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಧನ್ಯಶ್ರೀ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ಮಾತನಾಡಿ, ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ಪ್ರೇರಣೆಯಾಗುತ್ತದೆ.
ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಾಗುತ್ತದೆ ಎಂದರು.
ವಾರ್ಷಿಕೋತ್ಸವ ಕಾರ್ಯಕ್ರಮ ದಲ್ಲಿ ಸಂಘದ ಸದಸ್ಯರಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಪದ್ಮ ಬಾಂಧವ್ಯ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಏರ್ಪಡಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿದರು. ಒಕ್ಕೂಟದ ಪದಾಧಿಕಾರಿಗಳಾದ ವಿಜಯ, ಜಯಶೀಲಾ ಹಾಗೂ ಕೇಂದ್ರದ ಸದಸ್ಯರು ಇದ್ದರು.