ಮಡಿಕೇರಿ, ಮಾ. 22: ರಾಷ್ಟ್ರಪಿತ ಗಾಂಧೀಜಿಯವರ 150ನೇ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ, ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮಕ್ಕೆ ಮಹಾತ್ಮ ಗಾಂಧಿಯವರು ಭೇಟಿ ನೀಡಿ 85 ವರ್ಷಗಳಾಗಿದ್ದು, ಈ ಸವಿ ನೆನಪಿಗಾಗಿ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮ ಸಮಿತಿಯವರ ಸಮ್ಮುಖದಲ್ಲಿ ವಿಶೇಷ ಅಂಚೆ ಲಕೋಟೆಯನ್ನು ಬೆಂಗಳೂರು ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಆಶ್ರಮದ ಅಧ್ಯಕ್ಷ ಸ್ವಾಮೀಜಿಯವರಿಗೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು. ವಿಶೇಷ ಅಂಚೆ ಲಕೋಟೆಯನ್ನು ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮ ಸಮಿತಿ ಪ್ರಾಯೋಜಿಸಿದ್ದರು.