ಸಿದ್ದಾಪುರ, ಮಾ. 21: ಸ್ಥಳೀಯ ಸಿಟಿ ಬಾಯ್ಸ್ ಯುವಕ ಸಂಘದ ವತಿಯಿಂದ ನಡೆಯುತ್ತಿರುವ ಕೊಡಗು ಚಾಂಪಿಯನ್ಸ್ ಲೀಗ್ (ಕೆಸಿಎಲ್) 4ನೇ ಆವೃತ್ತಿಯ ಕ್ರೀಡಾಕೂಟದ ಅಧ್ಯಕ್ಷರಾಗಿ ರೆಜಿತ್‍ಕುಮಾರ್ ಗುಹ್ಯ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರಾಗಿ ಎಸ್.ಎಂ. ಮುಬಾರಕ್, ಪ್ರಧಾನ ಕಾರ್ಯದರ್ಶಿಯಾಗಿ ಎ.ಎಸ್. ಮುಸ್ತಫ, ಸಹ ಕಾರ್ಯದರ್ಶಿಯಾಗಿ ಶಾಹುಲ್, ಕೋಶಾಧಿಕಾರಿಯಾಗಿ ಎಂ.ಎ. ಅಜೀಜ್, ವೇದಿಕೆ ಸಮಿತಿಯ ಸಂಚಾಲಕರಾಗಿ ರದೀಶ್, ಮೈದಾನ ಸಮಿತಿಯ ಸಂಚಾಲಕರಾಗಿ ಶಫೀರ್ ಹಾಗೂ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಜಿಲ್ಲೆಯ ಗ್ರಾಮೀಣ ಭಾಗದ ಕ್ರಿಕೆಟ್ ಆಟಗಾರರನ್ನು ಗುರುತಿಸಿ ಐಪಿಎಲ್ ಮಾದರಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಸಿಎಲ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗುತ್ತಿದ್ದು, 4ನೇ ಆವೃತ್ತಿಯ ಪಂದ್ಯಾವಳಿಗೆ ಈಗಾಗಲೇ ತಯಾರಿಯನ್ನು ಮಾಡಿಕೊಂಡಿದೆ. 4ನೇ ಆವೃತ್ತಿಯ ಪಂದ್ಯಾವಳಿಯನ್ನು ವಿಜೃಂಭಣೆಯಿಂದ ಆಚರಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.