ಮಡಿಕೇರಿ, ಮಾ.21 : ಕೊಡಗು ಜಿಲ್ಲಾ ಕಾಂಗ್ರೆಸ್‍ನ ನೂತನ ವಕ್ತಾರರುಗಳನ್ನಾಗಿ ಟಿ.ಈ.ಸುರೇಶ್ ಮತ್ತು ಎಸ್.ಐ.ಮುನೀರ್ ಅಹಮ್ಮದ್ ಅವರುಗಳನ್ನು ನೇಮಕ ಮಾಡಲಾಗಿದೆ.
ಸೋಮವಾರಪೇಟೆ ತಾಲೂಕಿನ ತೋಳೂರು ಶೆಟ್ಟಳ್ಳಿ ಗ್ರಾಮದ ಟಿ.ಈ ಸುರೇಶ್ ಮತ್ತು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದ ಎಸ್.ಐ. ಮುನೀರ್ ಅಹಮ್ಮದ್ ಅವರನ್ನು ನೇಮಿಸಿ ಅಧ್ಯಕ್ಷ ಮಂಜುನಾಥ್ ಕುಮಾರ್ ಮಾಹಿತಿ ನೀಡಿದ್ದಾರೆ.