ವೀರಾಜಪೇಟೆ, ಮಾ. 21: ವೀರಾಜಪೇಟೆಯ ಸಿದ್ದಾಪುರ ರಸ್ತೆಯ ಮಲೆತಿರಿಕೆ ಬೆಟ್ಟದಲ್ಲಿರುವ ಮಲೆ ಮಹದೇಶ್ವರನ ಉತ್ಸವದ ಅಂಗವಾಗಿ ಇಲ್ಲಿನ ಮುಖ್ಯ ಬೀದಿಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು.
ಭಕ್ತಾದಿಗಳು ಮೆರವಣಿಗೆಯ ಸಂದರ್ಭ ಉತ್ಸವ ಮೂರ್ತಿಗೆ ಮುಖ್ಯ ಬೀದಿಗಳಲ್ಲಿ ಶ್ರದ್ಧಾಭಕ್ತಿಯಿಂದ ಈಡುಗಾಯಿ ಒಡೆದು ಪೂಜೆ ಸಲ್ಲಿಸುತ್ತಿದ್ದರು. ಉತ್ಸವ ಮೂರ್ತಿಗೆ ಇಲ್ಲಿನ ಜೈನರಬೀದಿಯಲ್ಲಿರುವ ಬಸವೇಶ್ವರ ದೇವಸ್ಥಾನ ಹಾಗೂ ಮುಖ್ಯರಸ್ತೆಯ ಕೃಷ್ಣ ಸ್ಟೋರ್ಸ್ ಬಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.