ಸೋಮವಾರಪೇಟೆ, ಮಾ. 21: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಶಿರಂಗಾಲದ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಿರಂಗಾಲ ಗ್ರಾಮದ ಅಕ್ಕಮಹಾ ದೇವಿ ಮಹಿಳಾ ಸಮಾಜದ ಅಧ್ಯಕ್ಷೆ ಪಾರ್ವತಮ್ಮ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭಾದ ರಾಜ್ಯಘಟಕದ ನಿರ್ದೇಶಕಿಯಾಗಿ ಆಯ್ಕೆಯಾದ ರಾಜೇಶ್ವರಿ ನಾಗರಾಜು ಅವರುಗಳನ್ನು ಸನ್ಮಾನಿಸ ಲಾಯಿತು. ಈ ಸಂದರ್ಭ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಬಸವಾ ಪಟ್ಟಣದ ತೋಂಟ ದಾರ್ಯ ಸಂಸ್ಥಾನ ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕದಳಿ ವೇದಿಕೆ ಅಧ್ಯಕ್ಷೆ ಲೇಖನಾ ಧರ್ಮೇಂದ್ರ ಮತ್ತಿತರರು ಉಪಸ್ಥಿತರಿದ್ದರು.