ಶನಿವಾರಸಂತೆ, ಮಾ. 22: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ತಾ. 23ರಂದು (ಇಂದು) ಬೆಳಿಗ್ಗೆ 10.30ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ವಿದ್ಯಾಸಂಸ್ಥೆ ಅಧ್ಯಕ್ಷ ಎ.ಎಂ. ಆನಂದ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಹಾಸನ ಎ.ವಿ.ಕೆ. ಕಾಲೇಜು ಪ್ರಾಧ್ಯಾಪಕ ಡಾ. ಎಚ್.ಎಲ್. ಮಲ್ಲೇಶ್ ಗೌಡ ಸಮಾರೋಪ ನುಡಿಯಾಡುವರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕೆ.ಟಿ. ಬೆಳ್ಳಿಗೌಡರು ಹಾಗೂ ನಿವೃತ್ತ ಪ್ರಾಂಶುಪಾಲ ಎಸ್.ಎಂ. ಉಮಾಶಂಕರ್ ಪಾಲ್ಗೊಳ್ಳುವರು. ಮಧ್ಯಾಹ್ನ 1.30ರಿಂದ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮವಿರುತ್ತದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.