ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಮಡಿಕೇರಿ, ಮಾ. 21: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಕೊಡಗು - ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಳೆದ ಬಾರಿ ಈ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿದ್ದ ಪ್ರತಾಪ್ ಸಿಂಹ ಅವರಿಗೆ ಎರಡನೇ ಬಾರಿಗೆ ಅವಕಾಶ ನೀಡಲಾಗಿದೆ. ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಜೆಪಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಪ್ರತಾಪ್ ಸಿಂಹ ಅವರನ್ನು ಕೊಡಗು - ಮೈಸೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.