ವೀರಾಜಪೇಟೆ, ಮಾ. 21: ವೀರಾಜಪೇಟೆ ತಾಲೂಕು ಕಚೇರಿಯ ಚುನಾವಣೆ ವಿಭಾಗದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು 209 ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ 24x7 ಕಂಟ್ರೋಲ್ ಕಚೇರಿಯನ್ನು ತೆರೆಯಲಾಗಿದೆ. ಸಾರ್ವಜನಿಕರು ಖುದ್ದಾಗಿ ಇಲ್ಲವೇ ದೂರವಾಣಿ ಸಂಖ್ಯೆ 08274-256328ನ್ನು ಸಂಪರ್ಕಿಸಬಹುದು ಎಂದು ಸಹಾಯಕ ಚುನಾವಣಾಧಿ ಕಾರಿ ಗೋವಿಂದರಾಜು ತಿಳಿಸಿದ್ದಾರೆ.