ಮಡಿಕೇರಿ, ಮಾ. 21: ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಣೆ ಜೊತೆಗೆ ಪ್ರಕೃತಿ ವಿಕೋಪದ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದ್ದು, ಮನೆ ನಿರ್ಮಾಣದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸ್ಪಷ್ಟಪಡಿಸಿದ್ದಾರೆ. ಪ್ರಕೃತಿ ವಿಕೋಪ ಸಂಬಂಧ ಈಗಾಗಲೇ ಆರಂಭ ವಾಗಿರುವ ಕಾಮಗಾರಿಗಳು ಮುಂದು ವರೆದಿವೆ, ಇದರಲ್ಲಿ ವಿಳಂಬ ಇಲ್ಲ. ಜೊತೆಗೆ ಪರಿಹಾರ ಕಾರ್ಯಗಳು ಮುಂದುವರೆದಿದ್ದು, ಇದಕ್ಕೆ ಯಾವದೇ ರೀತಿಯಲ್ಲಿ ತಡೆ ಇರುವದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಂಗಾರು ಮಳೆ ಆರಂಭ ವಾಗುವದರೊಳಗೆ ಮನೆ ನಿರ್ಮಾಣ ಕಾಮಗಾರಿಯನ್ನು ಪೂರ್ಣ ಗೊಳಿಸಲು ಜಿಲ್ಲಾಡಳಿತ ಪ್ರಯತ್ನಿ ಸುತ್ತಿದೆ. ಈಗಾಗಲೇ ಈ ಸಂಬಂಧ ಪರಿಶೀಲನೆ ಮಾಡಲಾಗಿದೆ ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದ್ದಾರೆ. ಪ್ರಕೃತಿ ವಿಕೋಪ ಸಂಬಂಧ ತುರ್ತಾಗಿ ಆಗಬೇಕಿರುವ ಬಾಕಿ ಇರುವ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಅನುಮತಿಗಾಗಿ ಪತ್ರ ಬರೆಯ ಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.