ಸೋಮವಾರಪೇಟೆ, ಮಾ. 21: ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿಯನ್ನು ಗೆಲ್ಲಿಸುವಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರಚಾರ ಕಾರ್ಯ ಆರಂಭಿಸಿದ್ದು, ಇಲ್ಲಿನ ಚೌಡ್ಲು ಗ್ರಾ.ಪಂ. ವ್ಯಾಪ್ತಿಯ ಗಾಂಧಿನಗರ ಶ್ರೀ ದೊಡ್ಡ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಹಿಂದೂ ಜಾಗರಣಾ ವೇದಿಕೆಯ ಪ್ರಮುಖರಾದ ಸುಭಾಷ್ ತಿಮ್ಮಯ್ಯ, ದರ್ಶನ್ ಜೋಯಪ್ಪ, ಎಂ.ಬಿ. ಉಮೇಶ್, ಮನು, ಹರ್ಷ ಸೇರಿದಂತೆ ಇತರರು ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಕೇಂದ್ರ ಸರ್ಕಾರದ 5 ವರ್ಷಗಳ ಆಡಳಿತದಲ್ಲಿ ಕೈಗೊಂಡ ಸಾಧನೆಗಳನ್ನು ಹೊಂದಿರುವ ಕರಪತ್ರಗಳನ್ನು ಮನೆ ಮನೆಗಳಿಗೆ ಹಂಚಿ, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.