ಮಡಿಕೇರಿ, ಮಾ. 21: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು ಕಡಗದಾಳು, ಚೆಟ್ಟಳ್ಳಿ, ನೆಲ್ಲಿಹುದಿಕೇರಿ ಮತ್ತು ಸಿದ್ದಾಪುರ ಮತ್ತಿತರ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತಗಟ್ಟೆ ಕೇಂದ್ರದಲ್ಲಿ ರ್ಯಾಂಪ್ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಮತ್ತಿತರ ಮೂಲ ಸೌಲಭ್ಯಗಳು ಇವೆಯೇ ಎಂಬದನ್ನು ಪರಿಶೀಲಿಸಿದರು. ಹಾಗೆಯೇ ಚುನಾವಣಾ ಪ್ರಕ್ರಿಯೆ ಸಂಬಂಧ ಹಲವು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರರು, ಸೆಕ್ಟರ್ ಅಧಿಕಾರಿಗಳು ಇತರರು ಇದ್ದರು.