ಮಡಿಕೇರಿ, ಮಾ. 21: ಕೊಡವ ಸಮಾಜಗಳ ಒಕ್ಕೂಟದ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಬಾಳುಗೋಡು ಕೊಡವ ಸಮಾಜದಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು.
ಮೈಸೂರಿನ ವೈದ್ಯರಾದ ಡಾ. ಅಪ್ಪನೆರವಂಡ ಸೋನಿಯಾ ಮಂದಪ್ಪ ಹಾಗೂ ವೀರಾಜಪೇಟೆ ಸರಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ತಾತಂಡ ಜ್ಯೋತಿ ಪ್ರಕಾಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭ ಜ್ಯೋತಿ ಪ್ರಕಾಶ್ ಅವರು 10 ಸಾವಿರ ರೂ.ಗಳನ್ನು ಠೇವಣಿ ಇಟ್ಟರಲ್ಲದೆ ಇದರ ಬಡ್ಡಿ ಹಣದಿಂದ ಪ್ರತಿವರ್ಷ ಮಹಿಳಾ ಸಾಧಕರನ್ನು ಗೌರವಿಸಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.
ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಚೆರಿಯಪಂಡ ಇಮ್ಮಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖಜಾಂಚಿ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.