ಮಡಿಕೇರಿ, ಮಾ. 22: ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ನಾಲ್ಕನೇ ದಿನವಾದ ಇಂದು ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ. ಉತ್ತಮ ಪ್ರಜಾಕೀಯ ಪಾರ್ಟಿಯ ಆಶಾರಾಣಿ ವಿ. ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಆರ್. ಮೊಹಲ್ಲದ ಎನ್.ಕೆ. ಕಾವೇರಿಯಮ್ಮ ಅವರುಗಳು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಒಟ್ಟು 9 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.