ಸೋಮವಾರಪೇಟೆ, ಮಾ. 21: ಪಟ್ಟಣ ವ್ಯಾಪ್ತಿಯಲ್ಲಿ ಐಪಿಡಿಎಸ್ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿರುವದರಿಂದ ಪಟ್ಟಣ ವ್ಯಾಪ್ತಿಯಲ್ಲಿ ತಾ. 22 ರ ನಂತರ ಕಾಮಗಾರಿ ಪೂರ್ಣಗೊಳ್ಳುವವರೆಗೆ ವಿದ್ಯುತ್ ಸರಬರಾಜಿನಲ್ಲಿ ಆಗಾಗ್ಗೆ ಅಡಚಣೆ ಉಂಟಾಗುವ ಸಾಧ್ಯತೆ ಇರುತ್ತದೆ. ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸೆಸ್ಕ್‍ನ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.