ವೀರಾಜಪೇಟೆ, ಮಾ. 21: ವೀರಾಜಪೇಟೆ ತಾಲೂಕು ಸವಿತಾ ಸಮಾಜದ ವತಿಯಿಂದ ಏಪ್ರಿಲ್ 29 ಮತ್ತು 30 ರಂದು ವೀರಾಜಪೇಟೆ ಜೂನಿಯರ್ ಕಾಲೇಜು ಮ್ಯೆದಾನದಲ್ಲಿ ಮೂರನೇ ವರ್ಷದ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಕೆ.ಟಿ. ವೆಂಕಟೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾಂಗವನ್ನು ಒಗ್ಗೂಡಿಸಿ ಜನಾಂಗದ ನಡುವೆ ಸಾಮರಸ್ಯದ ಬೆಸುಗೆ ಹಾಕಲು ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಪುರುಷರಿಗೆ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ಹಗ್ಗಜಗ್ಗಾಟ ಹಾಗೂ ಸಂಗೀತ ಕುರ್ಚಿ ಕ್ರೀಡೆಯನ್ನು ನಡೆಸಲಾಗುತ್ತಿದೆ. ವಿಜೇತರಿಗೆ ರೂ. 15 ಸಾವಿರ, ಪರಾಜಿತರಿಗೆ ರೂ. 10 ಸಾವಿರ ನಗದು ಹಾಗೂ ಪಾರಿತೋಷಕ ನೀಡಲಾಗುವದು. ಪಂದ್ಯಾಟದಲ್ಲಿ ಭಾಗವಹಿಸುವ ಆಟಗಾರರು ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ತರತಕ್ಕದು. ಪಾಲ್ಗೊಳ್ಳುವ ತಂಡಗಳು ಏಪ್ರಿಲ್ 20 ರೊಳಗೆ ಕೆ.ಟಿ. ವೆಂಕಟೇಶ್ 9449783485, ಅನಿಲ್‍ಕುಮಾರ್ 9741936164 ಇವರುಗಳಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಸಹ ಅಧ್ಯಕ್ಷ ಅನಿಲ್‍ಕುಮಾರ್, ಉಪಾಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ಈಶ್ವರ್, ಖಜಾಂಚಿ ಸುಭಾಶ್, ಸಹ ಕಾರ್ಯದರ್ಶಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.